Breaking News

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಿಯುಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಲೆಕ್ಕಿಗ ಹುದ್ದೆ ಪಡೆದಿದ್ದ ಕೋಲಾರ ಜಿಲ್ಲೆಯ ನಾಲ್ವರಿಗೆ ಬೆಳಗಾವಿಯ ಎರಡನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಮತ್ತು ತಲಾ 19,000 ರೂ.ದಂಡ ವಿಧಿಸಿದೆ. 2012ರ ಸೆಪ್ಟೆಂಬರ್ ನಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇದ್ದ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ರಾಜು ವೆಂಕಟೇಶಪ್ಪ, ಮೋಹನಕುಮಾರ ಚಂದ್ರಪ್ಪ, ಮಂಜುನಾಥ ಭೈರಪ್ಪ, ಮತ್ತು ಬಾಲಕೃಷ್ಣ ವೆಂಕಟಪ್ಪ ಎಂಬುವರು ಅರ್ಜಿ ಸಲ್ಲಿಸಿದ್ದರು. ಇವರು ಸಲ್ಲಿಸಿದ ಅಂಕಪಟ್ಟಿ, ದಾಖಲೆಗಳ ಆಧಾರದ ಮೇಲೆ ನೇಮಕವಾಗಿದ್ದು, ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಕಂಡುಬಂದಿತ್ತು. ಆಗಿನ ಜಿಲ್ಲಾಧಿಕಾರಿ ಎನ್. ಜಯರಾಮ್ ಅವರು ಬೆಳಗಾವಿ ಮಾರ್ಕೆಟ್ ಠಾಣೆಗೆ ದೂರು ನೀಡಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *