Breaking News

ಕಾನ್ಸ್‌ಟೇಬಲ್ ಪರೀಕ್ಷೆ ವೇಳೆ ಹಲವು ಅನುಮಾನ – ವಿಜಯಪುರದಲ್ಲಿ ಭುಗಿಲೆದ್ದ ಪರೀಕ್ಷಾರ್ಥಿಗಳ ಆಕ್ರೋಶ

ವಿಜಯಪುರದ ತಿಕೋಟಾದ ಶಾರದಾಂಬಾ ಪಿಯು ಕಾಲೇಜಿನಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ವಿತರಣೆಯಲ್ಲಿ ವಿಳಂಬವಾಗಿದ್ದರಿಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಬೆಳಗ್ಗೆ 10:30ಕ್ಕೆ ನೀಡಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು 11 ಗಂಟೆಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ವಿಳಂಬದಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಖ್ಯ ಗೇಟ್ ಮುರಿದು ಆಕ್ರೋಶ ವ್ಯಕ್ತಪಡಿಸಿದರು. ಸಮಯದ ಕೊರತೆಯಿಂದ ಪರೀಕ್ಷೆಗೆ ಅನ್ಯಾಯವಾಗಿದೆ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಆನಂದ ಕೆ. ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಭ್ಯರ್ಥಿಗಳನ್ನು ಸಮಾಧಾನಪಡಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *