ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬನ ಮೇಲೆ ಅದೇ ತರಗತಿಯ 19 ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗೆ ಪೆನ್‌ನಿಂದ ಚುಚ್ಚಿ ಗಾಯಗೊಳಿಸಿ, ವಿವಿಧ ರೀತಿಯಲ್ಲಿ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ. ಜ್ವರದಿಂದ ಮನೆಗೆ ಕರೆದುಕೊಂಡು ಹೋದಾಗ ವಿದ್ಯಾರ್ಥಿಯ ದೇಹದ ಮೇಲಿನ ಗಾಯಗಳು ಪೋಷಕರ ಗಮನಕ್ಕೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ ಕುರಿತು ಪೋಷಕರು ಹಾಸ್ಟೆಲ್ ವಾರ್ಡನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗಾಯಾಳು ವಿದ್ಯಾರ್ಥಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

