Breaking News

ವಿಜಯನಗರ : ಪೋಲೀಸರ ಹಲ್ಲೆಯಿಂದ ಕಸ್ಟಡಿಯಲ್ಲೇ ಆರೋಪಿ ಸಾವು? : ಕುಟುಂಬಸ್ಥರಿಂದ ಗಂಭೀರ ಆರೋಪ!

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಹಲ್ಲೆ ಮಾಡಿದ್ದರಿಂದ ಕಸ್ಟಡಿಯಲ್ಲಿಯೇ ಖಲೀಲ್ (38) ಸಾವನ್ನಪ್ಪಿದ್ದಾನೆ ಎನ್ನುವುದು ಇದೀಗ ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಹರಪನಹಳ್ಳಿ ತಾಲೂಕಿನ ನಂದಿಪುರದ ಯುವತಿಯನ್ನು ಖಲೀಲ್ ಮದುವೆಯಾಗಿದ್ದ. ಪತ್ನಿ ಜೊತೆ ಜಗಳವಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಠಾಣೆಗೆ ಕರೆತಂದಿದ್ದರು. ವಿಚಾರಣೆಗೆ ಕರೆತಂದಿದ್ದ ವೇಳೆ ಫಿಟ್ಸ್ ಬಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಗರಿಬೊಮ್ಮನಹಳ್ಳಿ ಠಾಣೆ ಎಸ್ಪಿ ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಟ್ಟಡ ಕಾರ್ಮಿಕ ಮೃತಪಟ್ಟಿದ್ದ ಹಿನ್ನಲೆ ಠಾಣೆ ಎದುರು ಜನರು ಜಮಾಯಿಸಿದ್ದು, ಮುನ್ನೆಚ್ಚರಿಕೆಯಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಶವ ಶಿಫ್ಟ್ ಮಾಡಲಾಗಿದೆ. ಹಗರಿಬೊಮ್ಮನಹಳ್ಳಿ ಠಾಣೆಗೆ ಶಾಸಕ ಕೆ ನೇಮಿರಾಜ್ ನಾಯಕ ಭೇಟಿ ನೀಡಿದ್ದಾರೆ. ಎಸ್‌ಪಿ ಜಾಹ್ನವಿಯಿಂದ ಮಾಹಿತಿ ಪಡೆದಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *