ಬೆಂಗಳೂರು: ಡೇಟಿಂಗ್ ಆ್ಯಪ್‌ಗಳ ಮೂಲಕ ಯುವಕರನ್ನು ಪರಿಚಯಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಕರೆಸಿಕೊಂಡು ದರೋಡೆ ಮಾಡುತ್ತಿದ್ದ ಗ್ಯಾಂಗ್‌ನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಆನೇಕಲ್‌ನ ವಿಶಾಲ್, ಅಜಯ್, ಸಂಜಯ್ ಹಾಗೂ ಸೂರ್ಯ ಬಂಧಿತರಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಪ್ರಾಪ್ತರನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ. ‘ಗ್ರೈಂಡರ್’ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯ ಮಾತು ನಂಬಿ ಬಂದಿದ್ದ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಜೀವ ಬೆದರಿಕೆ ಹಾಕಿ ₹45 ಸಾವಿರವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿಕೊಂಡು, ಚಿನ್ನದ ಉಂಗುರ ಕಸಿದು ಪರಾರಿಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ತನಿಖೆಯಲ್ಲಿ ಆರೋಪಿಗಳು ನಕಲಿ ಖಾತೆಗಳ ಮೂಲಕ ಯುವಕರನ್ನು ಬಲೆಗೆ ಬೀಳಿಸಿ, ನಿರ್ಜನ ಸ್ಥಳಗಳಿಗೆ ಕರೆಸಿ ಹಣ, ಮೊಬೈಲ್ ಹಾಗೂ ಚಿನ್ನಾಭರಣ ದೋಚುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಜಿಗಣಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

