Breaking News

ಅಂದರ್ ಬಾಹರ್ ಅಡ್ಡೆ ಮೇಲೆ ಬೆಳಗಾವಿ ಪೊಲೀಸರ ದಾಳಿ: 15 ಜನ ವಶಕ್ಕೆ*

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಹಣ ಕಟ್ಟಿ ಇಸ್ಪೀಟ ಆಡುತ್ತಿದ್ದವರ ಮೇಲೆ ಬೆಳಗಾವಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ 15 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ವಾಘವಾಡೆ ಗ್ರಾಮದ ಮಾರ್ಖಂಡೆಯ ನಗರದಲ್ಲಿ ನಡೆದ ದಾಳಿಯಲ್ಲಿ ಆರೋಪಿಗಳಿಂದ ₹69,150 ನಗದು ಹಾಗೂ ಇಸ್ಪೀಟ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಪಿಎಸ್‌ಐ ಸಂತೋಷ ದಳವಾಯಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 87 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ದಾಳಿ ನಡೆಸಿದ ಪೊಲೀಸ್ ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *