ಹಾಸನ: ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ಕೊಲೆ ಮಾಡಿದ್ದೇನೆ ಎಂದು ವಿಡಿಯೋ ಸಂದೇಶ ಬಿಟ್ಟು, ಬಳಿಕ ರಘು ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ಬಳಿಕ ಪತ್ನಿ ಗಗನಾ ನಾಪತ್ತೆಯಾಗಿದ್ದು, ಆಕೆಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಮೃತ ಗಗನಾಳ ಸಹೋದರ ಯೋಗೇಶ್ ವಿಡಿಯೋ ಬಿಡುಗಡೆ ಮಾಡಿ, ರಘು ತನ್ನ ಅಕ್ಕನಿಗೆ ನಿರಂತರವಾಗಿ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ. ರಘು ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿರುವ ಅವರು, ಸುಳ್ಳು ಸುದ್ದಿಗಳನ್ನು ಹರಡಬೇಡಿ ಹಾಗೂ ಪ್ರಕರಣದ ಸಂಪೂರ್ಣ ಸತ್ಯ ಹೊರಬರಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ. ಸಾಯುವ ಮುನ್ನ ರಘು ವಿಡಿಯೋದಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. ಚಿಕ್ಕಮಗಳೂರಿನಲ್ಲೇ ಘಟನೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಮೃತದೇಹಕ್ಕಾಗಿ ಹಾಗೂ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪೊಲೀಸರು ತನಿಖೆ ಮತ್ತು ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

