ಯಾದಗಿರಿ: ಮದುವೆಯಾಗಿ ಕೇವಲ ಮೂರು ತಿಂಗಳಾಗಿದ್ದ ನವವಿವಾಹಿತೆ ಕಾಲುವೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸಾಯಿನಗರ ಗ್ರಾಮದಲ್ಲಿ ನಡೆದಿದೆ. ಆಷಾಢ ಮಾಸದ ಹಿನ್ನೆಲೆಯಲ್ಲಿ ತಾಯಿ ಮನೆಗೆ ಹೋಗಿದ್ದ ರೇಣುಕಾ, ಗಂಡ ಕರೆಪ್ಪ ಯಾಳಗಿ ಜೊತೆ ಅತ್ತೆ ಮನೆಗೆ ಮರಳುವ ವೇಳೆ ಬೈಕ್ ನಿಯಂತ್ರಣ ತಪ್ಪಿ ಎಡದಂಡೆ ಕಾಲುವೆಗೆ ಬಿದ್ದಿದೆ. ಈಜು ಬಲ್ಲಿದ್ದ ಕರೆಪ್ಪ ದಡ ಸೇರಿದ್ದರೆ, ರೇಣುಕಾ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾಳೆ. ಆಕೆಯ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರಕರಣದ ಕುರಿತು ಅನುಮಾನ ವ್ಯಕ್ತಪಡಿಸಿರುವ ಅವರು ತನಿಖೆಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

