Breaking News

ಹುಣ್ಣಿಮೆ ದಿನವೇ ನಡೀತು ಘೋರ ಕೃತ್ಯ; ಹಸಿರು ಸೀರೆ, ಬಳೆ ಜೊತೆ ಅರೆಬೆಂದ ಸ್ಥಿತಿಯಲ್ಲಿ ಯುವತಿ ಶವ, ಅಸಲಿಗೆ ಅಲ್ಲಿ ಆಗಿದ್ದೇನು?

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಅಶ್ರಿಹಾಳ್ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಹುಣ್ಣಿಮೆಯ ಮರುದಿನ ಶಿವಕುಮಾರ್ ಎಂಬುವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಯುವತಿಯನ್ನು ವಾಮಾಚಾರಕ್ಕೆ ಬಲಿ ಕೊಟ್ಟಿರಬಹುದೇ ಅಥವಾ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಸುಟ್ಟು ಹಾಕಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಪ್ರದೇಶ ಬೆಟ್ಟಗುಡ್ಡಗಳಿಂದ ಕೂಡಿದ್ದು, ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ ತನಿಖೆ ಪೊಲೀಸರಿಗೆ ಸವಾಲಾಗಿದೆ. ಶವ ಪತ್ತೆಯಾದ ಸ್ಥಳದಲ್ಲೇ ಹಸಿರು ಸೀರೆ ಹಾಗೂ ಹಸಿರು ಬಳೆಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *