ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆಗೆ ವೀಡಿಯೋ ಕರೆ ಮಾಡಿ ಖಾಸಗಿ ಅಂಗ ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿದ್ದ ತಮಿಳುನಾಡು ಮೂಲದ ಯುವಕನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತ್ಯಾಗರಾಜನಗರ ನಿವಾಸಿ 34 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಫೇಸ್‌ಬುಕ್‌ನಲ್ಲಿದ್ದ ಮಹಿಳೆಯ ಮೊಬೈಲ್ ಸಂಖ್ಯೆಯನ್ನು ಪಡೆದು ಮೊದಲು ಸಂದೇಶ ಕಳುಹಿಸಿದ್ದ. ಬಳಿಕ ಜುಲೈ 30ರಂದು ವೀಡಿಯೋ ಕರೆ ಮಾಡಿ ಅಶ್ಲೀಲವಾಗಿ ವರ್ತಿಸಿ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಇದರಿಂದ ಆತಂಕಗೊಂಡ ಮಹಿಳೆ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಮೊಬೈಲ್ ಸಂಖ್ಯೆ ಹಾಗೂ ತಾಂತ್ರಿಕ ಮಾಹಿತಿಯನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯು ಡಿಪ್ಲೋಮಾ ವ್ಯಾಸಂಗ ಮುಗಿಸಿದ್ದು, ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

