Breaking News

ಟೋಲ್‌ ಸಿಬ್ಬಂದಿಗೆ ಗನ್‌, ಲಾಂಗ್‌ ತೋರಿಸಿ ಬೆದರಿಕೆ; ಬ್ಯಾರಿಕೇಡ್ ಗೆ ಕಾರು ಗುದ್ದಿಸಿ ಹೋದ ಪುಂಡರು

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಚೌಲಗೆರೆ ಟೋಲ್‌ಪ್ಲಾಜಾದಲ್ಲಿ ಸುಂಕ ಪಾವತಿಸಲು ನಿರಾಕರಿಸಿದ ಐವರು ಪುಂಡರು ಟೋಲ್ ಸಿಬ್ಬಂದಿಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ಆರೋಪಿಗಳು ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಆರೋಪಿಗಳು ಗನ್ ಹಾಗೂ ಲಾಂಗ್ ತೋರಿಸಿ ಟೋಲ್ ಬ್ಯಾರಿಯರ್ ತೆರೆಯುವಂತೆ ಬೆದರಿಕೆ ಹಾಕಿದ್ದಾರೆ. ಯಾವುದೇ ಸುಂಕ ಪಾವತಿಸದೇ ಕಾರನ್ನು ಬ್ಯಾರಿಯರ್‌ಗೆ ಗುದ್ದಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದು, ಈ ಘಟನೆ ಟೋಲ್ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಲೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತೋರಿಸಿದ ಗನ್ ಅಸಲಿಯೋ ಅಥವಾ ನಕಲಿಯೋ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *