Breaking News

ಹಾಸನದಲ್ಲಿ ಆಘಾತಕಾರಿ ಘಟನೆ: ತಂದೆ ಮೊಬೈಲ್ ಕೊಡಿಸದಿದ್ದಕ್ಕೆ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ

ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ತಂದೆ ಮೊಬೈಲ್ ಫೋನ್ ಕೊಡಿಸದಿದ್ದಕ್ಕೆ ಮನನೊಂದು 13 ವರ್ಷದ ಪ್ರೀತಮ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಪ್ರೀತಮ್ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಮೊಬೈಲ್‌ಗಾಗಿ ಪದೇ ಪದೇ ಒತ್ತಾಯಿಸಿದರೂ, ಓದಿನ ಮೇಲೆ ಪರಿಣಾಮ ಬೀಳಬಹುದು ಎಂದು ತಂದೆ ನಿರಾಕರಿಸಿದ್ದರು. ಇದರಿಂದ ಮನನೊಂದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಕರೆದೊಯ್ದರೂ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಹಾಸನ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಜ್ಞರು ಮಕ್ಕಳೊಂದಿಗೆ ಪೋಷಕರು ನಿರಂತರ ಸಂವಹನ ನಡೆಸಿ, ಅವರ ಭಾವನಾತ್ಮಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *