ಬೆಂಗಳೂರು ಚಾಮರಾಜಪೇಟೆ ಪೊಲೀಸ್ ಠಾಣೆ ಸಮೀಪ ಡೆಲಿವರಿ ಬೈಕ್ ಸೇವೆ ಬಳಸಿಕೊಂಡು ಕೊಕೇನ್ ಸಾಗಿಸುತ್ತಿದ್ದ ಆರೋಪದ ಮೇಲೆ 30 ವರ್ಷದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಪದೇಪದೆ ಡೆಲಿವರಿ ಬೈಕ್‌ಗಳು ಅಪಾರ್ಟ್‌ಮೆಂಟ್‌ಗೆ ಬರುತ್ತಿದ್ದುದನ್ನು ಗಮನಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಪರಿಶೀಲನೆ ವೇಳೆ ಚಾಕೊಲೇಟ್ ಬಾಕ್ಸ್‌ಗಳೊಳಗೆ ಬಚ್ಚಿಟ್ಟಿದ್ದ 116.3 ಗ್ರಾಂ ಕೊಕೇನ್ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹50 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಲಿವರಿ ರೈಡರ್‌ಗಳಿಗೆ ವೇಗವಾಗಿ ಸಾಗಾಟ ಮಾಡಲು ಹೆಚ್ಚುವರಿಯಾಗಿ ಟಿಪ್ ನೀಡುತ್ತಿದ್ದ ಮಾಹಿತಿ ಕೂಡ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರನ್ನು ಜಪ್ತಿ ಮಾಡಲಾಗಿದ್ದು, ಮತ್ತೊಬ್ಬ ಆರೋಪಿ ಅಕ್ಷಿತ್ ಪರಾರಿಯಾಗಿದ್ದಾನೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಡ್ರಗ್ಸ್ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

