ಧಾರವಾಡ: ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಎಸ್.ಲಾಡ್ ಅವರಿಗೆ ಮತ್ತೆ ಸಚಿವ ಸ್ಥಾನ ಒಲಿದಿದೆ. ಮೂರನೇ ಬಾರಿಗೆ ಅವರಿಗೆ ಸಚಿವರಾಗುವ ಅವಕಾಶ ಲಭಿಸಿದೆ. ಲಾಡ್ ಅವರು ಮರಾಠ ಸಮುದಾಯದವರು. ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಲಾಡ್ ಅವರು ಕಾರ್ಮಿಕ ಸಚಿವ ಮತ್ತು ಧಾರವಾಡ ಜಿಲ್ಲಾ ಉಸ್ತವಾರಿ ಸಚಿವರಾಗಿದ್ದರು. 2013ರಲ್ಲಿ ಅವರು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿದ್ದರು. ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಅವರ ಆಪ್ತರು. ಸಂತೋಷ್ ಅವರು ಲಾಡ್ ಅವರು ಬಳ್ಳಾರಿ ಜಿಲ್ಲೆಯ ಸಂಡೂರಿನವರು. ಶಿವಾಜಿ ವಿ.ಲಾಡ್ ಮತ್ತು ಶೈಲಜಾ ಲಾಡ್ ದಂಪತಿಯ ಪುತ್ರ. ಸಂತೋಷ್ ಅವರು ಬಿ.ಕಾಂ ಪದವಿ ಪಡೆದಿದ್ದಾರೆ. ಲಾಡ್ ಅವರ ಪತ್ನಿ ಕೀರ್ತಿ ಮತ್ತು ಪುತ್ರ ಕರಣ್ ಲಾಡ್.ಸಂತೋಷ್ ಲಾಢ್ ಅವರು 2002ರಲ್ಲಿ ಸಂಡೂರು ಪಟ್ಟಣ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. 2004 ಮತ್ತು 2008ರಲ್ಲಿ ಸಂಡೂರು ವಿಧಾನ ಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2013 ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಸೋಲುಂಡಿದ್ದರು. 2023 ರಲ್ಲಿ ಕಲಘಟಗಿ ಕ್ಷೇತ್ರದಿಂದ ಮತ್ತೆ ಆಯ್ಕೆಯಾದರು
bigtvnews | Hubli Dharwad News | Kannada News | Karnataka News Hubli News | News In Hubli | Local news

