Breaking News

ಸಂಪುಟ ವಿಸ್ತರಣೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ರಾಜೀನಾಮೆ!

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ನಾಯಕರ ಬೆಂಬಲಿಗರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಸಚಿವ ಸ್ಥಾನ ಹಂಚಿಕೆ ಕುರಿತ ಅಸಮಾಧಾನ ಎಷ್ಟರ ಮಟ್ಟಿಗೆ ತೀವ್ರವಾಗಿದೆ ಎಂಬುದನ್ನು ತೋರಿಸಿದೆ.

ಇನ್ನೊಂದೆಡೆ, ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಸಚಿವ ಸ್ಥಾನ ಸಿಗದಿದ್ದಕ್ಕೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಪಕ್ಷದೊಳಗಿನ ಅಸಮಾಧಾನಕ್ಕೆ ಮತ್ತಷ್ಟು ಇಂಬು ನೀಡಿವೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *