Breaking News

ಬರೋಬ್ಬರಿ 5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!

ಮೈಸೂರು: ಜಮೀನಿನ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಎಸಿ ಕಾವ್ಯಾರಾಣಿ ಹಾಗೂ ಕಚೇರಿಯ ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್.ಡಿ. ಕೋಟೆ ತಾಲೂಕಿನ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನವಿದ್ದರೂ ಕೆಲಸ ಮಾಡಿಕೊಡಲು ಲಂಚ ಕೇಳಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆ ಡಾ. ರೂಪಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಲೆ ಬೀಸಿದ ಅಧಿಕಾರಿಗಳು, ಎಸಿ ಅವರ ಅಧಿಕೃತ ನಿವಾಸದಲ್ಲಿ ನಡೆದ ಹಣದ ವ್ಯವಹಾರದ ವೇಳೆ ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು. ಪ್ರಸ್ತುತ ಎಸಿ ಕಾವ್ಯಾರಾಣಿ ಹಾಗೂ ಗುಮಾಸ್ತ ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *