Breaking News

ಹುಬ್ಬಳ್ಳಿ-ವಿಜಯಪುರ ಬಸ್ ಅಪಘಾತ! 9 ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬಸ್‌ ಚಾಲಕನ ನಿಯಂತ್ರಣ ತಪ್ಪಿ ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್‌ ಬಳಿ ರಸ್ತೆ ಪಕ್ಕಕ್ಕೆ ಉರುಳಿ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 38 ಮಂದಿಯಲ್ಲಿ ನಿರ್ವಾಹಕ ಸೇರಿ 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕೆಎ28 ಎಫ್ 2263 ಸಂಖ್ಯೆಯ ಬಸ್ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ನರಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ NWKRTC ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಪಕ್ಕದ ಎತ್ತರದಿಂದ ಬಸ್ ನಿಧಾನವಾಗಿ ವಾಲಿ ಉರುಳಿರುವುದಾಗಿ ತಿಳಿದುಬಂದಿದ್ದು, ಅಪಘಾತದ ನಿಖರ ಕಾರಣ ಪತ್ತೆಗಾಗಿ ಇಲಾಖಾ ಮಟ್ಟದಲ್ಲಿ ತನಿಖೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *