ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ಲೈನ್ ಆಫ್ ಮಾಡಿದ ಕುರಿತು ಮುಂಚಿತವಾಗಿ ಮಾಹಿತಿ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ (ಎ.ಇ.) ಒಬ್ಬರು ಆಪರೇಟರ್ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಗಾಯಗೊಂಡ ಆಪರೇಟರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. 33 ಕೆವಿ ವಿದ್ಯುತ್ ಮಾರ್ಗದ ಜಂಪರ್ ದುರಸ್ತಿಗಾಗಿ ಆಪರೇಟರ್ ರಾಘವ ಅವರು ಲೈನ್ ಆಫ್ ಮಾಡಿದ್ದು, ಈ ಬಗ್ಗೆ ವಿಭಾಗದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾಗಿ ಹೇಳಲಾಗಿದೆ. ಆದರೆ, ಈ ವಿಷಯ ತಿಳಿಸಿಲ್ಲ ಎಂದು ಆರೋಪಿಸಿ ಎ.ಇ. ಸುಪ್ರೀತ್ ಅವರು ಆಪರೇಟರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ರಾಘವ ಅವರ ಕಣ್ಣಿನ ಭಾಗಕ್ಕೆ ಗಾಯವಾಗಿದ್ದು, ಚಿಕಿತ್ಸೆ ಬಳಿಕ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

