ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಹದಿಹರೆಯದವರೂ ಸೇರಿ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಖಾಸಗಿ ಅಂಗಗಳನ್ನು ವಿರೂಪಗೊಳಿಸಲಾಗಿದ್ದು, ದೇಹದ ಹಲವು ಭಾಗಗಳಲ್ಲಿ ಚಿತ್ರಹಿಂಸೆಯ ಗಾಯದ ಗುರುತುಗಳು ಪತ್ತೆಯಾಗಿವೆ. ಕುಟುಂಬದವರೊಂದಿಗೆ ಔತಣಕೂಟಕ್ಕೆ ತೆರಳಿದ್ದ ಬಾಲಕಿ ರಾತ್ರಿ ಒಬ್ಬಳೇ ಮನೆಗೆ ಮರಳಿದ್ದಳು. ಬಳಿಕ ಮನೆಯವರು ಮನೆಗೆ ಬಂದಾಗ ಆಕೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೊ ಸೇರಿದಂತೆ ವಿವಿಧ ಕಾಯ್ದೆಗಳಡಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರಕರಣದ ಸಂಪೂರ್ಣ ಸತ್ಯಾಂಶ ತಿಳಿಯಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

