Breaking News

ತನ್ನ ಗ್ಯಾರೇಜ್ ಬಳಿ ಮೂತ್ರ ವಿಸರ್ಜಿಸಿದ್ದಕ್ಕೆ ವ್ಯಕ್ತಿಯ ಹತ್ಯೆ: ಕಾರು ಮೆಕ್ಯಾನಿಕ್ ಬಂಧನ

ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ಯಾರೇಜ್‌ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡಿದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮೆಕ್ಯಾನಿಕ್ ಮೊಹಮ್ಮದ್ ಯೂಸೆಫ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 28ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ತೆರಳುತ್ತಿದ್ದ ಕುಮಾರ್ (43) ಗ್ಯಾರೇಜ್ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಆರೋಪಿ ಜಗಳ ಆರಂಭಿಸಿದ್ದಾನೆ. ಬಳಿಕ ಬೈಕ್‌ನಿಂದ ಕುಮಾರ್ ಅವರನ್ನು ಕೆಳಗೆ ಎಳೆದಿದ್ದು, ಅವರು ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *