Breaking News

ವಿನಯ್​ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆ ಅಮಾನತು: ಶಾಸಕ ಸ್ಥಾನ ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ

ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಿಂದ ಶಾಸಕತ್ವ ಕಳೆದುಕೊಂಡಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರಾಜ್ಯ ವಿಧಾನಸಭೆ ಸಚಿವಾಲಯ ಮರುಸ್ಥಾಪಿಸಿದೆ. ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. 2016ರಲ್ಲಿ ನಡೆದ ಯೋಗೇಶ್‌ಗೌಡ ಕೊಲೆ ಪ್ರಕರಣದ ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಅವರು ಶಾಸಕ ಸ್ಥಾನದಿಂದ ಅನರ್ಹರಾಗಿದ್ದರು. ಆದರೆ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಿದ ಹಿನ್ನೆಲೆಯಲ್ಲಿ, ವಿಧಾನಸಭೆ ಸಚಿವಾಲಯ ಅವರ ಅನರ್ಹತೆಯನ್ನು ಹಿಂಪಡೆದು ಶಾಸಕ ಸ್ಥಾನವನ್ನು ಪುನಃ ಮರುಸ್ಥಾಪಿಸಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *