Breaking News

ಹುಟ್ಟುಹಬ್ಬದ ಪಾರ್ಟಿಗೆ ಕರೆದು ಯುವತಿಯನ್ನು ಹತ್ಯೆ ಮಾಡಿದರಾ ? ಮಂಡ್ಯ ಕಾರು ಅಪಘಾತದ ಹಿಂದೆ ಅತ್ಯಾಚಾರ ಯತ್ನದ ಶಂಕೆ !

ಮಂಡ್ಯದಲ್ಲಿ ಹುಟ್ಟುಹಬ್ಬದ ಆಚರಣೆಗೆ ಸ್ನೇಹಿತರೊಂದಿಗೆ ತೆರಳಿದ್ದ ಯುವತಿ ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆರಂಭದಲ್ಲಿ ರಸ್ತೆ ಅಪಘಾತ ಎಂದು ಹೇಳಲಾಗಿದ್ದರೂ, ಮೃತಳ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಮೃತ ಯುವತಿ ನವೀನಾ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿದ್ದ ವೇಳೆ ಅಪಘಾತ ಸಂಭವಿಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರಿನಲ್ಲಿದ್ದ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕುಟುಂಬಸ್ಥರು, ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಬಳಿಕ ಕೊಲೆ ಮಾಡಿ ಅಪಘಾತದಂತೆ ಬಿಂಬಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರಿನಲ್ಲಿದ್ದವರ ಹೇಳಿಕೆ, ಸಿಸಿಟಿವಿ ದೃಶ್ಯಗಳು, ಮೊಬೈಲ್ ಕರೆ ವಿವರಗಳು ಹಾಗೂ ವೈದ್ಯಕೀಯ ವರದಿಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಸಾವಿನ ನಿಖರ ಕಾರಣದ ಬಗ್ಗೆ ಯಾವುದೇ ತೀರ್ಮಾನಕ್ಕೆ ಬರಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *