Breaking News

ನಾಲ್ವರು ಇಂಜನೀಯರಿಂಗ್​ ವಿದ್ಯಾರ್ಥಿಗಳ ಬಂಧನ

ಉಡುಪಿಯ ಮಣಿಪಾಲದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆಗಸ್ಟ್ 2ರಂದು ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಪವನಕುಮಾರ್ ಎಂಬ ಯುವಕನನ್ನು ಆರೋಪಿಗಳು ತಡೆದು ಮೆಟಲ್ ಪಂಚ್‌ನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆ ತಡೆಯಲು ಬಂದ ಸಹೋದರ ಹಾಗೂ ಸ್ನೇಹಿತನ ಮೇಲೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಯಶ್‌ರಾಜ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಮಣಿಪಾಲ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *