ಬೆಂಗಳೂರು ಬೇಗೂರುದಲ್ಲಿ ಮನೆ ಮಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ರಹಸ್ಯವಾಗಿ ಚಿತ್ರೀಕರಿಸಿದ ಆರೋಪದಡಿ ಸಾಫ್ಟ್‌ವೇರ್ ಉದ್ಯೋಗಿ ಮಂಜುನಾಥ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕಳೆದ ಐದು ವರ್ಷಗಳಿಂದ ಸಂತ್ರಸ್ತೆಯ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ. ಜುಲೈ 27ರಂದು ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಬಾತ್‌ರೂಮ್ ಕಿಟಕಿಯಲ್ಲಿ ಮೊಬೈಲ್ ಇಟ್ಟು ವಿಡಿಯೋ ಸೆರೆ ಹಿಡಿಯುತ್ತಿದ್ದಾಗ ಮಹಿಳೆ ಗಮನಿಸಿ ಕೂಗಿಕೊಂಡಿದ್ದಾರೆ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಮಹಿಳೆಯ ಸ್ನಾನದ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

