Breaking News

ಬೀದರ್‌: ನಾಲ್ವರು ಕಳ್ಳರ ಬಂಧನ, ₹2.75 ಲಕ್ಷ ಮೌಲ್ಯದ 55 ಸಿಲಿಂಡರ್‌ ಜಪ್ತಿ

ಬೀದರ್ ಜಿಲ್ಲೆಯ ಭಾಲ್ಕಿ ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಸಿಲಿಂಡರ್‌ ಕಳ್ಳರನ್ನು ಬಂಧಿಸಿ, ಅವರಿಂದ ₹2.75 ಲಕ್ಷ ಮೌಲ್ಯದ 55 ಗ್ಯಾಸ್‌ ಸಿಲಿಂಡರ್‌ ಹಾಗೂ ಕೃತ್ಯಕ್ಕೆ ಬಳಸಿದ್ದ ₹7 ಲಕ್ಷ ಮೌಲ್ಯದ ಕಾರನ್ನು ಜಪ್ತಿ ಮಾಡಿದ್ದಾರೆ. ಬಂಧಿತರು ಭಾಲ್ಕಿ ಹಾಗೂ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳ ಅಡುಗೆ ಕೋಣೆಗಳ ಬೀಗ ಒಡೆದು ಸಿಲಿಂಡರ್‌ ಕಳವು ಮಾಡುತ್ತಿದ್ದರು. ಕಳವು ಮಾಡಿದ ಸಿಲಿಂಡರ್‌ಗಳನ್ನು ಮಹಾರಾಷ್ಟ್ರದಲ್ಲಿ ಮಾರಾಟ ಮಾಡಲು ಯೋಜಿಸಿದ್ದ ವೇಳೆ ಬೀದರ್–ಉದಗೀರ್‌ ರಸ್ತೆಯ ಬೀರಿ ಕ್ರಾಸ್‌ ಬಳಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭಾಲ್ಕಿ ಗ್ರಾಮೀಣ, ಮೆಹಕರ್‌ ಹಾಗೂ ಖಟಕಚಿಂಚೋಳಿ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *