ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ದಾಖಲೆಗಳಿಲ್ಲದೆ ಮರ ಸಾಗಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಮಠ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ ರೋಹಿತ್ ಎಸ್.ಎಲ್. ಅವರನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದ್ದು, ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದೆ. ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

