Breaking News

ತಂದೆಯ ಕತ್ತು ಹಿಸುಕಿ ಕೊಲೆ: ಆರೋಪಿ ಪುತ್ರನ ಬಂಧನ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಣಿನಘಟ್ಟ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ನಡೆದಿದೆ. ಶಿವಾಗ ನಾಯ್ಕ (55) ಮೃತರಾಗಿದ್ದು, ಹಿರಿಯ ಪುತ್ರ ಮಂಜುನಾಥ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ನಿರ್ಮಾಣ ಹಾಗೂ ಮಕ್ಕಳ ಮದುವೆಗಾಗಿ ಮಾಡಿದ್ದ ಸಾಲದ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಕುಟುಂಬದವರು ಹಳೆಯ ಮನೆಯಲ್ಲಿ ವಾಸವಿದ್ದು, ಶಿವಾಗ ನಾಯ್ಕ ಹೊಸ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದ ಶಿವಾಗ ನಾಯ್ಕ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಪುತ್ರನೊಂದಿಗೆ ವಾಗ್ವಾದ ನಡೆದಿದೆ. ಕೈಕೈ ಮಿಲಾಯಿಸಿದ ಸಂದರ್ಭ ಮಂಜುನಾಥ್ ತಂದೆಯ ಕುತ್ತಿಗೆ ಹಿಸುಕಿದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *