Breaking News

ಪೊಲೀಸರೇ ಗಂಡನನ್ನು ಕೊಂದ್ರು, ಮಕ್ಕಳನ್ನ ಎದೆಗವಚಿಕೊಂಡು ವಾಹನದ ಹಿಂದೆ ಓಡಿದೆ: ಶೈನಾಜ್ ಬೇಗಂ

ವಿಜಯನಗರದಲ್ಲಿ ಲಾಕಪ್‌ನಲ್ಲಿ ಮೃತಪಟ್ಟ ಕಟ್ಟಡ ಕಾರ್ಮಿಕ ಖಲೀಲ್ ಸಾಬ್ ಅವರ ಪತ್ನಿ ಶೈನಾಜ್ ಬೇಗಂ, ತಮ್ಮ ಪತಿಯನ್ನು ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಕಾರಣ ಬುದ್ಧಿ ಹೇಳಲು ಠಾಣೆಗೆ ಕರೆತಂದಿದ್ದರೂ, ಇಬ್ಬರು ಪೊಲೀಸರು ಹಲ್ಲೆ ನಡೆಸಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಪತಿ ಠಾಣೆಯಲ್ಲೇ ಮೃತಪಟ್ಟಿದ್ದರೂ ಚಿಕಿತ್ಸೆಗಾಗಿ ಕರೆದೊಯ್ಯುವ ನೆಪದಲ್ಲಿ ವಾಹನದಲ್ಲಿ ಕರೆದೊಯ್ದರು. ಆಸ್ಪತ್ರೆಯಲ್ಲಿ ಪತಿಯ ಬಾಯಿ ಮತ್ತು ಕಿವಿಯಿಂದ ರಕ್ತ ಬರುತ್ತಿರುವುದನ್ನು ಕಂಡಿದ್ದೇನೆ. ಯಾವುದೇ ಪರಿಹಾರ ಬೇಡ, ನನಗೆ ನ್ಯಾಯ ಮಾತ್ರ ಬೇಕು ಎಂದು ಶೈನಾಜ್ ಬೇಗಂ ಕಣ್ಣೀರಿಟ್ಟರು. ಪೊಲೀಸರು ಹೇಳುತ್ತಿರುವ “ಜಾರಿ ಬಿದ್ದು ಮೃತಪಟ್ಟಿದ್ದಾರೆ” ಎಂಬ ವಿವರಣೆ ಸಂಪೂರ್ಣ ಕಟ್ಟುಕತೆ ಎಂದು ಅವರು ಆರೋಪಿಸಿದರು. ಈ ವೇಳೆ ಕುಟುಂಬವನ್ನು ಭೇಟಿಯಾದ ಎನ್.ಎಂ. ನೂರ್ ಅಹಮದ್, ನಾಲ್ಕು ದಿನಗಳಾದರೂ ಮರಣೋತ್ತರ ಪರೀಕ್ಷೆ ವರದಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿದರು. ಪ್ರಕರಣದ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೆ ಕುಟುಂಬದ ಕಾನೂನು ಹೋರಾಟಕ್ಕೆ ಬೆಂಬಲ ನೀಡುವುದಾಗಿ ಅವರು ಹೇಳಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *