ಯಾದಗಿರಿ : ಕೆಮಿಕಲ್ ಸೋರಿಕೆಯಿಂದಾಗಿ ಕಾರ್ಖಾನೆಯ ಮೂವರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಯಾದಗಿರಿಯ ಕಡೇಚೂರ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಔಷಧಿಗಳನ್ನು ತಯಾರಿಸವು ಸಿಲ್ ಲ್ಯಾಬೋರೇಟರಿ ಕಾರ್ಖಾನೆಯಲ್ಲಿ ಈ ಅವಘಡ ನಡೆದಿದೆ. ಮೃತರ ಪೈಕಿ ಇಬ್ಬರು ಉತ್ತರ ಭಾರತದ ಮೂಲದವರಾಗಿದ್ದು, ಮತ್ತೊಬ್ಬರು ತೆಲಂಗಾಣ ಮೂಲದವರೆನ್ನಲಾಗಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆಯ ಹೊತ್ತಿನಲ್ಲಿ ಇದ್ದಕ್ಕಿದ್ದಂತೆಯೇ ರಾಸಾಯನಿಕ ಸೋರಿಕೆಯಾಗಿ, ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಈ ರೀತಿ ದುಷ್ಪರಿಣಾಮ ಬೀರಿದೆ. ಅವಘಡಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

