ಚಿಕ್ಕಬಳ್ಳಾಪುರ:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು, ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರು ರಾಜೀನಾಮೆ ಮತ್ತು ಪ್ರತಿಭಟನೆಗಳ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಮೂರು ಬಾರಿ ಶಾಸಕರಾಗಿದ್ದರೂ ಅವರನ್ನು ಕಡೆಗಣಿಸಲಾಗಿದೆ ಎಂದು ಬೆಂಬಲಿಗರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಅಂಬರೀಶ್ ಎಂಬ ಬೆಂಬಲಿಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ತಕ್ಷಣವೇ ವಶಕ್ಕೆ ಪಡೆದು ಅನಾಹುತ ತಪ್ಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

