Breaking News

7 ಬಾರಿ ಗೆದ್ದರೂ ಸಿಗದ ಮಂತ್ರಿ ಭಾಗ್ಯ, ಮೊಳಕಾಲ್ಮುರು ರಾಜಕೀಯ ಇತಿಹಾಸ

ಮೊಳಕಾಲ್ಮುರು ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ಮತ್ತೊಮ್ಮೆ ಕೈತಪ್ಪಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಏಳು ಬಾರಿ ಶಾಸಕರಾಗಿದ್ದರೂ ಅವಕಾಶ ನೀಡದಿರುವುದು ಮೊಳಕಾಲ್ಮುರು ಕ್ಷೇತ್ರಕ್ಕೆ ಮಾಡಿದ ಅನ್ಯಾಯ ಎಂದು ಕಾರ್ಯಕರ್ತರು ಮತ್ತು ಅಭಿಮಾನಿಗಳು ಆರೋಪಿಸಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಎನ್‌.ವೈ. ಗೋಪಾಲಕೃಷ್ಣ, ಕ್ಷೇತ್ರಕ್ಕೆ ಮರಳಿದ ಬಳಿಕ ಜನಾಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಚಿವ ಸ್ಥಾನ ಪಡೆಯಲು ಯಾವ ಮಾನದಂಡ ಬೇಕು ಎಂಬುದೇ ಅರ್ಥವಾಗುತ್ತಿಲ್ಲ. ನಿಗಮ-ಮಂಡಳಿ ಹುದ್ದೆಯನ್ನೂ ಕೇಳುವುದಿಲ್ಲ ಎಂದು ಹೇಳಿದ್ದು, ಕ್ಷೇತ್ರದ ಕೆಲ ಮುಖಂಡರು ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ರಾಂಪುರದಲ್ಲಿ ಬೆಂಬಲಿಗರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಒಬ್ಬ ಬೆಂಬಲಿಗ ವಿಷ ಸೇವಿಸಲು ಮುಂದಾದಾಗ ಪೊಲೀಸರು ತಡೆದು ಅನಾಹುತ ತಪ್ಪಿಸಿದರು. ಕಾಂಗ್ರೆಸ್ ಕ್ಷೇತ್ರಕ್ಕೆ ದ್ರೋಹ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *