Breaking News

ಹಾವೇರಿ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ, ಜನರಿಗೆ ತಲೆಬಿಸಿ

ಹಾವೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಖೋಟಾ ನೋಟುಗಳ ಚಲಾವಣೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ಇತ್ತೀಚೆಗೆ ಬ್ಯಾಡಗಿಯ ಬ್ಯಾಂಕ್‌ವೊಂದರಲ್ಲಿ ₹500 ಮುಖಬೆಲೆಯ ಐದು ಖೋಟಾ ನೋಟುಗಳು ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆಯಲ್ಲಿ ವೃದ್ಧೆಯೊಬ್ಬರು ಆ ನೋಟುಗಳನ್ನು ಬ್ಯಾಂಕ್‌ಗೆ ಜಮೆ ಮಾಡಲು ತಂದಿದ್ದರೆಂಬುದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ, ಬಣ್ಣದ ಪ್ರಿಂಟರ್ ಬಳಸಿ ಅಸಲಿ ನೋಟಿನಂತೆಯೇ ಕಾಣುವ ನಕಲಿ ನೋಟುಗಳನ್ನು ಮುದ್ರಿಸಿ ಮಾರುಕಟ್ಟೆಯಲ್ಲಿ ಚಲಾವಣೆ ಮಾಡಲಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ವಾರದ ಸಂತೆ, ಕಿರಾಣಿ ಅಂಗಡಿ, ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಕಡೆಗಳಲ್ಲಿ ಗ್ರಾಹಕರ ಸೋಗಿನಲ್ಲಿ ಖೋಟಾ ನೋಟುಗಳನ್ನು ವಿನಿಮಯ ಮಾಡುತ್ತಿರುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹಾಗೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಆರ್‌ಬಿಐ ಮಾರ್ಗಸೂಚಿಯಂತೆ ನೋಟಿನ ವಾಟರ್‌ಮಾರ್ಕ್, ಸುರಕ್ಷತಾ ದಾರ, ಮುದ್ರಣದ ಗುಣಮಟ್ಟ ಹಾಗೂ ಇತರ ಭದ್ರತಾ ಲಕ್ಷಣಗಳನ್ನು ಪರಿಶೀಲಿಸಿ ಅಸಲಿ-ನಕಲಿ ಗುರುತಿಸಬಹುದು. ಅನುಮಾನಾಸ್ಪದ ನೋಟು ಸಿಕ್ಕರೆ ಸಮೀಪದ ಬ್ಯಾಂಕ್ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *