Breaking News

ಗಾಂಜಾ ಜೊತೆ ಸಿಕ್ಕಿ ಬಿದ್ದ ವಿದ್ಯಾರ್ಥಿಗಳು: 290 ಗ್ರಾಂ ಮಾದಕ‌ ಪದಾರ್ಥ ಪತ್ತೆ

ಬೆಂಗಳೂರು ನಗರದ ಕಾಲೇಜೊಂದರಲ್ಲಿ ನಡೆಸಿದ ತಪಾಸಣೆಯಲ್ಲಿ ಮೂವರು ವಿದ್ಯಾರ್ಥಿಗಳು 290 ಗ್ರಾಂ ಗಾಂಜಾದೊಂದಿಗೆ ಸಿಕ್ಕಿಬಿದ್ದಿದ್ದಾರೆ. ಕಾಲೇಜು ಆಡಳಿತ ಮಾಹಿತಿ ನೀಡಿದ ಬಳಿಕ ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಗಾಂಜಾ ತಂದಿದ್ದ ಪ್ರಮುಖ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾದಕ ದ್ರವ್ಯ ತಡೆಗೆ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಜಾಗೃತಿ ಅಭಿಯಾನಗಳು ಹೆಚ್ಚಾಗಿದ್ದು, ಶಿಕ್ಷಣ ಸಂಸ್ಥೆಗಳು ಇದೇ ರೀತಿಯ ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಕ್ಯಾಂಪಸ್‌ಗಳನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಸಾಧ್ಯ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *