Breaking News

ಹಳೆ ಲವರ್‌ ಕಾಟ ತಾಳಲಾರದೇ ಜೀವ ಬಿಟ್ಟ ಯುವತಿ.. ತ್ರಿಕೋನ ಪ್ರೇಮ ಪ್ರಕರಣದಲ್ಲಿ ಅಸಲಿಗೆ ಆಗಿದ್ದೇನು?

ಬಳ್ಳಾರಿಯಲ್ಲಿ ತ್ರಿಕೋನ ಪ್ರೇಮ ಪ್ರಕರಣ ದುರಂತ ಅಂತ್ಯ ಕಂಡಿದೆ. ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಮಾಜಿ ಪ್ರಿಯಕರ ಬೆದರಿಕೆ ಹಾಕಿದ್ದರಿಂದ ಮನನೊಂದ ಫೀರ್ದೋಸ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿ ಮೊದಲು ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದು, ಬಳಿಕ ಆತನಿಂದ ದೂರವಾಗಿ ಸೋಹೈಲ್ ಎಂಬ ಯುವಕನನ್ನು ಮದುವೆಯಾಗಲು ನಿರ್ಧರಿಸಿದ್ದರು. ಈ ವಿಚಾರ ತಿಳಿದ ಅಜೀಂ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕುಟುಂಬಸ್ಥರು ದೂರಿದ್ದಾರೆ. ಆತ್ಮಹತ್ಯೆಗೆ ಮುನ್ನ ಯುವತಿ ಹೊಸ ಪ್ರಿಯಕರನಿಗೆ ವಿಡಿಯೋ ಕರೆ ಮಾಡಿ ನಡೆದ ಘಟನೆಗಳನ್ನು ವಿವರಿಸಿದ್ದಾಳೆ ಎನ್ನಲಾಗಿದೆ. ಪ್ರಕರಣ ಸಂಬಂಧ ಕೌಲಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *