Breaking News

ಸುಳ್ಯ | ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ಚಾಲಕ ಗೋಪಾಲಕೃಷ್ಣ ಜಯನಗರನನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾವೇರಿ ಮೂಲದ ಮಹಿಳೆ ಸೂರ್ತಿಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಬಾಣಂತಿಯರ ಆರೈಕೆ ಕೆಲಸ ಮಾಡುತ್ತಿದ್ದರು. ಈ ವೇಳೆ ಪರಿಚಯವಾದ ಆರೋಪಿ 2025ರ ಜೂನ್‌ನಲ್ಲಿ ಮನೆಗೆ ಕರೆಸಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದು, ಘಟನೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆಗಸ್ಟ್ 2ರಂದು ಮತ್ತೆ ಮನೆಗೆ ಬರುವಂತೆ ಒತ್ತಾಯಿಸಿ, ಬರದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಹಾಗೂ ಮಹಿಳೆ ಮತ್ತು ಅವರ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *