Breaking News

ಸಾಲವಾಗಿ ಪಡೆದಿದ್ದ 5 ಲಕ್ಷ ಹಣ ವಾಪಾಸ್ ಕೇಳಿದ್ದಕ್ಕೆ ವಿವಾಹಿತ ಮಹಿಳೆ ರೇಪ್ ಕೇಸ್ ಬೆದರಿಕೆ: 24ರ ಯುವಕ ಆತ್ಮಹತ್ಯೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಕೊಪ್ಪಲು ಗ್ರಾಮದಲ್ಲಿ 24 ವರ್ಷದ ಹರೀಶ್ ಎಂಬ ಯುವಕ ಪಂಪ್‌ಹೌಸ್‌ನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಸಾಲವಾಗಿ ನೀಡಿದ್ದ ಹಣವನ್ನು ವಾಪಸ್ ಕೇಳಿದ ಬಳಿಕ ವಿವಾಹಿತೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಆತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬದ ಆರೋಪದ ಪ್ರಕಾರ, ಹರೀಶ್ ಮತ್ತು ಇಬ್ಬರು ಮಕ್ಕಳ ತಾಯಿ ದೀಪಿಕಾ ನಡುವೆ ನಾಲ್ಕು ವರ್ಷಗಳಿಂದ ಪರಿಚಯವಿದ್ದು, ಈ ಅವಧಿಯಲ್ಲಿ ದೀಪಿಕಾ 5 ಲಕ್ಷ ರೂಪಾಯಿ ಸಾಲ ಪಡೆದಿದ್ದಳು. ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ, ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ್ದಾಳೆ ಎಂದು ದೂರಲಾಗಿದೆ. ಮಗನ ಸಾವಿಗೆ ದೀಪಿಕಾ ನೀಡಿದ ಬೆದರಿಕೆ ಮತ್ತು ಮಾನಸಿಕ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಕೆಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *