Breaking News

ಜಮೀನು ವಿವಾದ ; ದಲಿತ ಕುಟುಂಬದ ಮೇಲೆ ಜಾತಿ ನಿಂದನೆ ಆರೋಪ; 12 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಟ್ಟೊಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ವಿರುದ್ಧ ಜಾತಿ ನಿಂದನೆ, ಅಕ್ರಮ ಪ್ರವೇಶ, ಹಲ್ಲೆಗೆ ಯತ್ನ ಹಾಗೂ ಜೀವ ಬೆದರಿಕೆ ಆರೋಪದಡಿ 12 ಮಂದಿಯ ವಿರುದ್ಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಸಿಂಗೆ ನೀಡಿದ ದೂರಿನ ಪ್ರಕಾರ, ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಬೆಳೆ ಪ್ರದೇಶಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಮತ್ತೊಮ್ಮೆ ಬಿತ್ತನೆ ನಡೆಸಿದ್ದು, ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿ, ಮಹಿಳೆಯರು ಕಣ್ಣಿಗೆ ಖಾರದ ಪುಡಿ ಎರಚಿ, ಟ್ರ್ಯಾಕ್ಟರ್ ಹಾಯಿಸಲು ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಾತಿ ನಿಂದನೆ ಆರೋಪ ಇರುವುದರಿಂದ ತನಿಖೆಯನ್ನು ಡಿಸಿಆರ್ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *