ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ 12 ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಟೋ ಚಾಲಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಮೊಬೈಲ್‌ನಲ್ಲಿ ವಿಡಿಯೋ ತೋರಿಸುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಜುಲೈ 29ರಂದು ನಡೆದಿದ್ದ ಈ ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆಯಿಂದ ಬಾಲಕಿ ಆರಂಭದಲ್ಲಿ ವಿಷಯವನ್ನು ಮನೆಯವರಿಗೆ ತಿಳಿಸಿರಲಿಲ್ಲ. ಬಳಿಕ ತಾಯಿಗೆ ನಡೆದ ವಿಚಾರವನ್ನು ವಿವರಿಸಿದ ನಂತರ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಆಗಸ್ಟ್ 3ರಂದು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆರೋಪಿ ಪ್ರವೀಣ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಾಲಕಿಯ ಹೇಳಿಕೆ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

