Breaking News

ಮಲ್ಲಾಪೂರದಲ್ಲಿ ಅನಾಮಧೇಯ ಮಹಿಳೆ ಶವ ಪತ್ತೆ; ಕೊಲೆ ಶಂಕೆ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪೂರ ಗ್ರಾಮದ ಸಮೀಪದ ಕೃಷಿ ಹೊಂಡದಲ್ಲಿ 25 ರಿಂದ 28 ವರ್ಷದೊಳಗಿನ ಅನಾಮಧೇಯ ಮಹಿಳೆಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ ಮಾಡಿ ಬಳಿಕ ಶವವನ್ನು ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಮಹಿಳೆಯ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಎಳೆದಿರುವ ಗುರುತುಗಳು ಕಂಡುಬಂದಿದ್ದು, ಕೊಲೆಯ ಹಿಂದೆ ದರೋಡೆ ಸೇರಿದಂತೆ ಇತರೆ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುತ್ತಮುತ್ತಲಿನ ಪೊಲೀಸ್ ಠಾಣೆಗಳೊಂದಿಗೆ ಮಾಹಿತಿ ಹಂಚಿಕೊಂಡು ಕಾಣೆಯಾಗಿರುವ ಮಹಿಳೆಯರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಇರುವ ಸಾರ್ವಜನಿಕರು ರೋಣ ಪೊಲೀಸ್ ಠಾಣೆ ಅಥವಾ ಗದಗ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *