Breaking News

ರಾಯಚೂರು ಜೈಲಿನಲ್ಲಿ ಖೈದಿ ಹಠಾತ್ ಸಾವು.. ಪೊಲೀಸರ ವಿರುದ್ಧ ಭುಗಿಲೆದ್ದ ಕುಟುಂಬಸ್ಥರ ಆರೋಪ

ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಭೀಮರಾಯ (42) ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಮೆದರಗೋಳ ಗ್ರಾಮದ ನಿವಾಸಿಯಾಗಿದ್ದ ಭೀಮರಾಯ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದರು. ಬುಧವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕವಾಗಿ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಭೀಮರಾಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಇದು ಕೇವಲ ಹೃದಯಾಘಾತವಲ್ಲ ಎಂದು ಆರೋಪಿಸಿ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ. ಜೈಲಿನಲ್ಲಿ ಸಂಭವಿಸಿದ ಸಾವು ಆಗಿರುವುದರಿಂದ ನಿಯಮಾನುಸಾರ ನ್ಯಾಯಾಂಗ ತನಿಖೆಯ ಸಾಧ್ಯತೆಯೂ ಇದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *