Breaking News

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; NIA ಯಿಂದ ಮೋಸ್ಟ್ ವಾಂಟೆಡ್ ಆರೋಪಿ ‘ಉಮರ್ ಫಾರೂಕ್’ ಅರೆಸ್ಟ್.!

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಮಹತ್ವದ ಯಶಸ್ಸು ಸಿಕ್ಕಿದೆ. ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್‌ನನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಉಮರ್ ಫಾರೂಕ್ ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೆ ಎನ್‌ಐಎ ₹4 ಲಕ್ಷ ಬಹುಮಾನ ಘೋಷಿಸಿತ್ತು. ಈ ಬಂಧನದೊಂದಿಗೆ ಪ್ರಕರಣದಲ್ಲಿ ಇದುವರೆಗೆ ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಎನ್‌ಐಎ ಶೋಧ ಕಾರ್ಯ ಮುಂದುವರಿಸಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಹತ್ಯೆಯ ಸಂಚು, ಆರೋಪಿಗಳಿಗೆ ಆಶ್ರಯ ನೀಡಿರುವುದು ಸೇರಿದಂತೆ ಹಲವು ಪ್ರಮುಖ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಈ ಬಂಧನದಿಂದ ಪ್ರಕರಣದ ತನಿಖೆಗೆ ಮತ್ತಷ್ಟು ವೇಗ ಸಿಕ್ಕಿದ್ದು, ಉಳಿದ ಆರೋಪಿಗಳ ಬಂಧನಕ್ಕಾಗಿ ಎನ್‌ಐಎ ಕಾರ್ಯಾಚರಣೆ ಮುಂದುವರಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *