ಬೆಂಗಳೂರು: ನಗರದ ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರ ಶವ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ಸಿರ್ಜನಾ (22) ಮತ್ತು ರಿತಾ (23) ಎಂದು ಗುರುತಿಸಲಾಗಿದ್ದು, ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಫ್‌ಎಸ್‌ಎಲ್ ತಂಡವೂ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ಹಂತದಲ್ಲಿ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಇದು ಆತ್ಮಹತ್ಯೆಯೋ ಅಥವಾ ಅನುಮಾನಾಸ್ಪದ ಸಾವೋ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬಸ್ಥರು, ಸ್ನೇಹಿತರು ಹಾಗೂ ಪರಿಚಿತರನ್ನು ವಿಚಾರಣೆಗೊಳಪಡಿಸಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಗೆ ಕಾರಣ ಸ್ಪಷ್ಟವಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

