ಚಿಕ್ಕಮಗಳೂರು: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದು ತನ್ನ ತೋಟದಲ್ಲೇ ರಹಸ್ಯವಾಗಿ ಹೂತಿಟ್ಟಿದ್ದ ಪ್ರಕರಣ ಐದು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಪತ್ನಿಯನ್ನು ಕೊಲೆಗೈದ ಬಳಿಕ ಮೃತದೇಹವನ್ನು ಹೂತಿಟ್ಟು, ನಂತರ ಆರೋಪಿ ರಘು ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ನಾಪತ್ತೆ ಪ್ರಕರಣದ ಮಾಹಿತಿ ಆಧರಿಸಿ ಬಸವನಹಳ್ಳಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತೋಟದಲ್ಲಿ ಶೋಧ ನಡೆಸಿದ ವೇಳೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲೇ ಮಹಜರು ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಆರಂಭದಲ್ಲಿ ನಾಪತ್ತೆ ಪ್ರಕರಣವಾಗಿ ದಾಖಲಾಗಿದ್ದ ಘಟನೆ, ಮೃತದೇಹ ಪತ್ತೆಯಾದ ಬಳಿಕ ಕೊಲೆ ಪ್ರಕರಣವಾಗಿ ಪರಿವರ್ತನೆಯಾಗಿದೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

