Breaking News

ಸರಣಿ ದನ ಕಳ್ಳತನ ಪ್ರಕರಣ: ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ದನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿ ಮೂಲದ ಅಬ್ದುಲ್ ಮಜೀದ್ (35) ಎಂದು ಗುರುತಿಸಲಾಗಿದ್ದು, ಆತ ಟೈಗರ್ ಗ್ಯಾಂಗ್‌ನ ಸಕ್ರಿಯ ಸದಸ್ಯನಾಗಿದ್ದಾನೆ ಎನ್ನಲಾಗಿದೆ. ಜುಲೈ 30ರಂದು ಆರೋಪಿಯ ಮಾಹಿತಿ ಪಡೆದ ಪೊಲೀಸರು ಹೆಬ್ರಿಯಿಂದ ಕಾರನ್ನು ಬೆನ್ನಟ್ಟಿದ್ದರು. ಆಗುಂಬೆಯಿಂದ ರಿಪ್ಪನ್‌ಪೇಟೆಯವರೆಗೆ ವೇಗವಾಗಿ ಕಾರು ಚಲಾಯಿಸಿದ ಆರೋಪಿ, ಬ್ಯಾರಿಕೇಡ್ ಕಂಡು ಬೆನವಳ್ಳಿ ಸಮೀಪ ಕಾರು ಬಿಟ್ಟು ಅರಣ್ಯಕ್ಕೆ ಪರಾರಿಯಾಗಿದ್ದ. ತಾಂತ್ರಿಕ ಮಾಹಿತಿ ಹಾಗೂ ಗುಪ್ತಚರ ಜಾಲದ ನೆರವಿನಿಂದ ಆರೋಪಿಯನ್ನು ಪತ್ತೆಹಚ್ಚಿದ ಆಗುಂಬೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನಿತರ ಆರೋಪಿಗಳು ಹಾಗೂ ಕಳ್ಳಸಾಗಣೆ ಜಾಲದ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *