ಬೆಳಗಾವಿ: ₹2 ಕೋಟಿ ಜೀವವಿಮೆ ಹಣಕ್ಕಾಗಿ ಮಾಜಿ ಸೈನಿಕ ಸಂದೀಪ್ ಮಾಂಜರಿ (45) ಅವರನ್ನು ಪತ್ನಿ ಸುಮಾ ಮಾಂಜರಿ ಹಾಗೂ ಆಕೆಯ ಪ್ರಿಯಕರ ಪುಂಡಲೀಕ್ ದೊಂಬರ್ ಸೇರಿ ಕೊಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂದೀಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಗ್ಲೂಕೋಸ್ ಡ್ರಿಪ್ಸ್ ಮೂಲಕ ವಿಷ ನೀಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಿಯಕರನ ಸೆಲ್ಫಿ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಕುಟುಂಬದ ದೂರಿನ ಮೇರೆಗೆ ಪೊಲೀಸರು ಮೂರು ತಿಂಗಳ ಬಳಿಕ ಮೃತದೇಹವನ್ನು ಹೊರತೆಗೆದು FSL ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

