Breaking News

33.50 ಲ.ರೂ. ದುರುಪಯೋಗ: ಮುಖ್ಯ ಬರಹಗಾರ್ತಿ ವಿರುದ್ಧ ಪ್ರಕರಣ

ಉಡುಪಿ: ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಸಮೃದ್ಧ ಸಂಜೀವಿನಿ ಒಕ್ಕೂಟದಲ್ಲಿ ಮುಖ್ಯ ಬರಹಗಾರ್ತಿಯಾಗಿರುವ ಅಶ್ವಿನಿ (33) ವಿರುದ್ಧ ₹33.50 ಲಕ್ಷ ಹಣ ದುರುಪಯೋಗ ಹಾಗೂ ನಕಲಿ ಸಹಿ-ಸೀಲು ಬಳಸಿ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಸರ್ಕಾರದಿಂದ ಬಂದ ಅನುದಾನವನ್ನು ಸ್ವಸಹಾಯ ಸಂಘಗಳಿಗೆ ಹಂಚಿಕೆ ಮಾಡದೇ, ನಕಲಿ ದಾಖಲೆಗಳ ಮೂಲಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕೂಟದ ಅಧ್ಯಕ್ಷರಿಗೆ ಬ್ಯಾಂಕ್ ವ್ಯವಹಾರಗಳ ಮೊಬೈಲ್ ಸಂದೇಶ ಬರದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *