Breaking News

ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ: ಇಬ್ಬರ ಬಂಧನ; ದಲಿತ ದೌರ್ಜನ್ಯ ಪ್ರಕರಣದಲ್ಲೂ ಆರೋಪಿಯ ಸೆರೆ

ಉಡುಪಿ: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ದೂರು-ಪ್ರತಿದೂರು ದಾಖಲಾಗಿದ್ದು, ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಸನತ್ ಮೊಗವೀರ ವಿರುದ್ಧ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಇನ್ನೊಂದೆಡೆ, ಸನತ್ ನೀಡಿದ ದೂರಿನ ಮೇರೆಗೆ ಯುವತಿಯ ತಂದೆ ರಾಮಕುಮಾರ್ ಹಾಗೂ ಸಹೋದರ ನಂದೀಶ್ ಅವರನ್ನು ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳಡಿ ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *