ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಧ್ಯಾಹ್ನ ನಡೆದ ಈ ದಾಳಿಯಲ್ಲಿ ಡೇವಿಡ್ ಡಿಸೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಶೂಟೌಟ್‌ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂತಕರ ಬಂಧನಕ್ಕಾಗಿ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

