Breaking News

ಕಸದ ರಾಶಿಯಿಂದ ಹತ್ತಿದ ಬೆಂಕಿ – ಕಾರು, ಬೈಕ್‌ಗಳ ಜೊತೆ ಟ್ರಾನ್ಸ್‌ಫಾರ್ಮರ್ ಸುಟ್ಟು ಭಸ್ಮ

ಬೆಂಗಳೂರು ನಗರದ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಗಾರ್ಡನ್ ಬಳಿ ಶುಕ್ರವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮೊದಲು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಪಕ್ಕದಲ್ಲಿದ್ದ ಕಸದ ರಾಶಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ವಾಹನಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಅನೇಕ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿಯಿಂದ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೂ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಡಿ.ಜೆ. ಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಬೆಂಕಿ ಅವಘಡದ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *