ದೇವನಹಳ್ಳಿಯಲ್ಲಿ ‘ವರ್ಕ್ ಫ್ರಂ ಹೋಂ’ ಉದ್ಯೋಗದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಕಿರಣ್ ಹಾಗೂ ಆತನ ಪತ್ನಿ ಆರತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರು ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ನಕಲಿ ಸಂಸ್ಥೆ ನಡೆಸುತ್ತಿದ್ದರು. ಮೇಣದಬತ್ತಿ, ಡ್ರೈ ಫ್ರೂಟ್ಸ್ ಹಾಗೂ ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ಹೇಳಿ, ₹1 ಲಕ್ಷ ಡೆಪಾಸಿಟ್ ಮಾಡಿದವರಿಗೆ ತಿಂಗಳಿಗೆ ₹23 ಸಾವಿರ ಸಂಬಳ ನೀಡುವ ಭರವಸೆ ನೀಡಿ ಸಾರ್ವಜನಿಕರಿಂದ ₹2 ಲಕ್ಷದಿಂದ ₹20 ಲಕ್ಷದವರೆಗೆ ಹಣ ಪಡೆದು ವಂಚಿಸಿದ್ದರು. ಸಂತ್ರಸ್ತರ ದೂರಿನ ಮೇರೆಗೆ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ವಂಚನೆಯ ಹಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

